ಸೈಬರ್ ಕ್ರೈಮ್ ಇಂದಿನ ದಿನದ ಅತಿ ದೊಡ್ಡ ಸಮಸ್ಯೆ. ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಬೇಕಿತ್ತು. ಆದರೆ ಇಂದು ಕಳ್ಳತನದ ವ್ಯಾಖ್ಯಾನ ಬದಲಾಗಿದೆ. ಕೆಲವೊಮೆ ನಮ್ಮ ಅನುಮತಿ ಪಡೆದು, ಕೆಲವೊಮ್ಮೆ ನಮ್ಮ ಅನುಮತಿಯಿಲ್ಲದೆ, ಬಹಳಷ್ಟು ಬಾರಿ ನಮ್ಮ ಅಜಾಗರೂಕತೆ ಕಾರಣ ಸೈಬರ್ ಕ್ರೈಮ್ ಘಟಿಸುತ್ತದೆ. ನಮ್ಮ ವರ್ಷಗಳ ಸಂಪಾದನೆ, ಉಳಿಕೆ ಸದ್ದಿಲ್ಲದೇ ಕ್ಷಣ ಮಾತ್ರದಲ್ಲಿ ಮಾಯವಾಗಿ ಬಿಡುತ್ತದೆ. ಕಾನೂನು ರೀತಿಯಲ್ಲಿ ಆಗೇನು ಮಾಡಬೇಕು? ಯಾರನ್ನು ಕೇಳಬೇಕು? ತಕ್ಷಣ ಕಾರ್ಯಪ್ರವೃತ್ತರಾದರೆ ಹಣವನ್ನು ಮರಳಿ ಪಡೆದುಕೊಳ್ಳಬಹುದೇ? ಎನ್ನುವ ಪ್ರಶ್ನೆಗಳಿಗೆ ಇಲ್ಲಿ ಉತ್ತರವಿದೆ. ಅದೆಷ್ಟು ವಿಧದಲ್ಲಿ ನಮ್ಮನ್ನು ಲೂಟಿ ಮಾಡಲು ಈ ಖದೀಮರು ನಿಂತಿದ್ದಾರೆ ಎನ್ನುವುದನ್ನು ಎಳೆ ಎಳೆಯಾಗಿ ಸರಳವಾಗಿ ಬಿಡಿಸಿ ಹೇಳುವ ಪ್ರಯತ್ನದಲ್ಲಿ ಸತೀಶ್ ಗೆದ್ದಿದ್ದಾರೆ. �... See more
ಸೈಬರ್ ಕ್ರೈಮ್ ಇಂದಿನ ದಿನದ ಅತಿ ದೊಡ್ಡ ಸಮಸ್ಯೆ. ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಬೇಕಿತ್ತು. ಆದರೆ ಇಂದು ಕಳ್ಳತನದ ವ್ಯಾಖ್ಯಾನ ಬದಲಾಗಿದೆ. ಕೆಲವೊಮೆ ನಮ್ಮ ಅನುಮತಿ ಪಡೆದು, ಕೆಲವೊಮ್ಮೆ ನಮ್ಮ ಅನುಮತಿಯಿಲ್ಲದೆ, ಬಹಳಷ್ಟು ಬಾರಿ ನಮ್ಮ ಅಜಾಗರೂಕತೆ ಕಾರಣ ಸೈಬರ್ ಕ್ರೈಮ್ ಘಟಿಸುತ್ತದೆ. ನಮ್ಮ ವರ್ಷಗಳ ಸಂಪಾದನೆ, ಉಳಿಕೆ ಸದ್ದಿಲ್ಲದೇ ಕ್ಷಣ ಮಾತ್ರದಲ್ಲಿ ಮಾಯವಾಗಿ ಬಿಡುತ್ತದೆ. ಕಾನೂನು ರೀತಿಯಲ್ಲಿ ಆಗೇನು ಮಾಡಬೇಕು? ಯಾರನ್ನು ಕೇಳಬೇಕು? ತಕ್ಷಣ ಕಾರ್ಯಪ್ರವೃತ್ತರಾದರೆ ಹಣವನ್ನು ಮರಳಿ ಪಡೆದುಕೊಳ್ಳಬಹುದೇ? ಎನ್ನುವ ಪ್ರಶ್ನೆಗಳಿಗೆ ಇಲ್ಲಿ ಉತ್ತರವಿದೆ. ಅದೆಷ್ಟು ವಿಧದಲ್ಲಿ ನಮ್ಮನ್ನು ಲೂಟಿ ಮಾಡಲು ಈ ಖದೀಮರು ನಿಂತಿದ್ದಾರೆ ಎನ್ನುವುದನ್ನು ಎಳೆ ಎಳೆಯಾಗಿ ಸರಳವಾಗಿ ಬಿಡಿಸಿ ಹೇಳುವ ಪ್ರಯತ್ನದಲ್ಲಿ ಸತೀಶ್ ಗೆದ್ದಿದ್ದಾರೆ. ಈ ಆಘಾತಕ್ಕೆ ತುತ್ತಾದಾಗ ತಕ್ಷಣ ಏನು ಮಾಡಬೇಕು? ಸಮಸ್ಯೆ-ಸಮಾಧಾನ ಎರಡನ್ನೂ ಇಲ್ಲಿ ಸತೀಶ್ ನೀಡಿದ್ದಾರೆ. ಹೆಚ್ಚುತ್ತಿರುವ ಸೈಬರ್ ಕ್ರೈಮ್ ಅಪರಾಧಗಳನ್ನು ತಡೆಗಟ್ಟುವುದು ಸರಕಾರದ ಕೆಲಸ ಎಂದು ಸುಮ್ಮನೆ ಕೂರುವಂತಿಲ್ಲ. ಅದರ ಬಗ್ಗೆ ಹೆಚ್ಚು ಮಾಹಿತಿ ತಿಳಿದುಕೊಂಡು ಜಾಗೃತರಾಗಿರಬೇಕಾದದ್ದು ನಾಗರಿಕರ ಕರ್ತವ್ಯ. ಆ ನಿಟ್ಟಿನಲ್ಲಿ ಸತೀಶ್ ವೆಂಕಟಸುಬ್ಬು ಅವರ ಸೈಬರ್ ಕ್ರೈಮ್-ತಡೆಗಟ್ಟುವುದು ಹೇಗೆ? ಸಹಾಯ ಮಾಡಲಿದೆ. ಶುಭವಾಗಲಿ. -ರಂಗಸ್ವಾಮಿ ಮೂಕನಹಳ್ಳಿ ಲೇಖಕ, ಅಂಕಣಕಾರ ಮತ್ತು ಆರ್ಥಿಕ ಸಲಹೆಗಾರ